ADVERTISEMENT

ರವಿ ಪೂಜಾರಿ ಬಂಧನದ ಕೀರ್ತಿ ಪಡೆಯುವ ಬದಲು ಗಣೇಶ್‌ ಬಂಧಿಸಿ ಪೌರುಷ ತೋರಿಸಿ– ಬಿಜೆಪಿ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2019, 10:08 IST
Last Updated 2 ಫೆಬ್ರುವರಿ 2019, 10:08 IST
   

ಬೆಂಗಳೂರು:ಭೂಗತ ಪಾತಕಿ ರವಿ ಪೂಜಾರಿ ಬಂಧನಕ್ಕೆ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ತಮಗೆ ತಾವೇ ಕೀರ್ತಿ ಪಡೆಯುವ ಬದಲು ಕಂಪ್ಲಿ ಶಾಸಕ ಗಣೇಶ್‌ ಅವರನ್ನು ಬಂಧಿಸಿ ಎಂದು ಬಿಜೆಪಿ ಟೀಕಿಸಿದೆ.

‘ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ’ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಮಾಡಿದೆ.

ಭೂಗತ ಪಾತಕಿ ರವಿ ಪೂಜಾರಿಯನ್ನು ಇಂಟರ್‌ಪೋಲ್ ಪೊಲೀಸರು ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿಸಿದ್ದಾರೆ.

ADVERTISEMENT

‘ರವಿ ಪೂಜಾರಿಯನ್ನು ಜ. 19ರಂದು ಬಂಧಿಸಲಾಗಿದೆ. ಆತನನ್ನು ಬಂಧಿಸಲು ಶ್ರಮಿಸಿದ ರಾಜ್ಯದ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದರು.

‘ಉದ್ಯಮಿ, ನಟರು ಸೇರಿದಂತೆ ಹಲವರಿಗೆ ಕರೆ ಮಾಡುತ್ತಿದ್ದ ಪೂಜಾರಿ ಜೀವ ಬೆದರಿಕೆ ಹಾಕುತ್ತಿದ್ದ. ಪೊಲೀಸ್‌ ಇಲಾಖೆಯ ಜೊತೆ ಚರ್ಚಿಸಿ ಆತನ ವಿರುದ್ಧದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಸೂಚಿಸಿದ್ದೆ. ಮೂರ್ನಾಲ್ಕು ತಿಂಗಳಿನಿಂದ ಆತನ ಬಗ್ಗೆ ರಾಜ್ಯದ ಪೊಲೀಸರು ಮಾಹಿತಿ ಕಲೆಹಾಕಿದ್ದರು. ಆತ ಸೆನೆಗಲ್‌ ನಲ್ಲಿರುವ ಮಾಹಿತಿ ತಿಳಿದುಕೊಂಡು ರಾಯಭಾರಿ ಕಚೇರಿಗೆ ವಿಷಯ ತಲುಪಿಸಿದ್ದರು’ ಎಂದು ಸಿಎಂ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.