ADVERTISEMENT

ಸಭಾಪತಿ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 18:32 IST
Last Updated 15 ಡಿಸೆಂಬರ್ 2020, 18:32 IST
ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌
ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌    

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಬಹುಸಂಖ್ಯಾತ ಸದಸ್ಯರ ವಿಶ್ವಾಸ ಕಳೆದುಕೊಂಡಿರುವ ಸಭಾಪತಿ ಪ್ರತಾಪಚಂದ್ರ ಶೆಟ್ಟಿಯವರು ಕೂಡಲೇ ತಮ್ಮ ಹುದ್ದೆಗೆ ಗೌರವಯುತವಾಗಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಒತ್ತಾಯಿಸಿದ್ದಾರೆ.

ಬಿಜೆಪಿ ಜತೆಗೆ ಜೆಡಿಎಸ್‌ ಸದಸ್ಯರು ಸಭಾಪತಿ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಿರುವುದರಿಂದ, ಅವರಿಗೆ ಬಹುಮತವಿಲ್ಲ. ಆದ್ದರಿಂದ ಸಭಾಪತಿ ಹುದ್ದೆಯಲ್ಲಿ ಮುಂದುವರಿಯಲು ಅವರಿಗೆ ನೈತಿಕ ಅಧಿಕಾರವಿಲ್ಲ ಎಂದು ತಿಳಿಸಿದರು.

ಅವಿಶ್ವಾಸ ನಿರ್ಣಯ ಮಂಡಿಸಿದ ಬಳಿಕ ಉದ್ದೇಶ ಪೂರ್ವಕವಾಗಿ ಸದನದಲ್ಲಿ ಪ್ರಸ್ತಾಪ ಮಂಡಿಸಲು ಅವಕಾಶ ನೀಡಲಿಲ್ಲ. ಮಾತ್ರವಲ್ಲದೆ, ಅದನ್ನು ತಿರಸ್ಕರಿಸಿದರು. ಸದನದ ನಿಯಮಾವಳಿಗೆ ವಿರುದ್ಧವಾಗಿ ನಡೆದುಕೊಂಡರು. ಇವತ್ತಿನ ಅಧಿವೇಶನದಲ್ಲಿ ಕಾಂಗ್ರೆಸ್‌ ಸದಸ್ಯರು ಉಪಸಭಾಪತಿಯವರನ್ನು ಬಲವಂತವಾಗಿ ಎಬ್ಬಿಸಿ ಹೊರ ದೂಡಿದ್ದು, ಬಾಗಿಲನ್ನು ಒದ್ದು ತೆರೆದದ್ದು ಗೂಂಡಾ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂದು ರವಿಕುಮಾರ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.