ಸಿದ್ದರಾಮಯ್ಯ
ಬೆಂಗಳೂರು: ‘ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ್ ಅವರ ನಾಲಿಗೆ ಜಾಸ್ತಿಯಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ರವಿಕುಮಾರ್ ನೀಡಿರುವ ಹೇಳಿಕೆ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳುವರು ಎಂದರು.
ವಿಧಾನಸೌಧದ ಆವರಣದಲ್ಲಿ ಈಚೆಗೆ ನಡೆದ ಪ್ರತಿಭಟನೆಯ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದಡಿ ರವಿಕುಮಾರ್ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿ ಕರ್ನಾಟಕ ಐಎಎಸ್ ಅಧಿಕಾರಿಗಳ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ. ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.