ADVERTISEMENT

ರೇಜರ್ ಪೇ ವಂಚನೆ: ₹ 78 ಕೋಟಿ ಮುಟ್ಟುಗೋಲು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2022, 16:20 IST
Last Updated 21 ಅಕ್ಟೋಬರ್ 2022, 16:20 IST

ಬೆಂಗಳೂರು: ಚೀನಾದಲ್ಲಿರುವ ವ್ಯಕ್ತಿಗಳು ಆ್ಯಪ್‌ ಮೂಲಕ ಸಾಲ ನೀಡಿ ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಐದು ಸ್ಥಳಗಳ ಮೇಲೆ ಬುಧವಾರ ದಾಳಿಮಾಡಿ ಶೋಧ ನಡೆಸಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ರೇಜರ್‌ ಪೇ ಕಂಪನಿಯ ವಿವಿಧ ಮರ್ಚೆಂಟ್‌ ಐಡಿ ಮತ್ತು ಬ್ಯಾಂಕ್‌ ಖಾತೆಗಳಲ್ಲಿದ್ದ ₹ 78 ಕೋಟಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ನಗರದ ಸೈಬರ್‌ ಅಪರಾಧ ವಿಭಾಗದ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿರುವ 18 ಪ್ರಕರಣಗಳ ತನಿಖೆಯ ಮುಂದುವರಿದ ಭಾಗವಾಗಿ ಇ.ಡಿ ಈ ಕಾರ್ಯಾಚರಣೆ ನಡೆಸಿದೆ. ಹಿಂದೆಯೂ ಕೂಡ ಶೋಧ ನಡೆಸಿ, ಹಣ ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ಈವರೆಗೆ ಒಟ್ಟು ₹ 95 ಕೋಟಿ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ ಪ್ರಕಟಣೆ ತಿಳಿಸಿದೆ.

ಚೀನಾದ ಪ್ರಜೆಗಳು ಭಾರತೀಯ ನಾಗರಿಕರ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡು ಕಂಪನಿಗಳನ್ನು ತೆರೆದು ಆ್ಯಪ್‌ ಮೂಲಕ ಸಾಲ ನೀಡಿ ಜನರನ್ನು ವಂಚಿಸುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ರೇಜರ್‌ ಪೇ ಕಂಪನಿಯ ಕಚೇರಿಗಳು ಹಾಗೂ ಈ ಕಂಪನಿಯ ಹಣಕಾಸು ವಹಿವಾಟು ನಿರ್ವಹಣಾ ಕೇಂದ್ರದ ಮೇಲೆ ದಾಳಿಮಾಡಿ, ಶೋಧ ನಡೆಸಲಾಗಿದೆ ಎಂದು ತನಿಖಾ ಸಂಸ್ಥೆ ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.