ಬೆಂಗಳೂರು: ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡಲಾಗುವುದು ಎಂದು ಆರ್‌ಸಿಬಿ ಮ್ಯಾನೆಜ್‌ಮೆಂಟ್ ಗುರುವಾರ ತಿಳಿಸಿದೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಧಿಕೃತ ಪ್ರಕಟಣೆಯಲ್ಲಿ, ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದೆ.
ಇದರ ಜೊತೆಗೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳ ಚಿಕಿತ್ಸೆಗೆ ನೆರವಾಗಲು RCB ಕೇರ್ಸ್ ಎಂಬ ನಿಧಿಯನ್ನು ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದೆ.
ನಿನ್ನೆಯ ಘಟನೆ ನಮಗೆ ನೋವುಂಟ ಮಾಡಿದೆ, ನಾವು ಸಹ ದುಃಖದಲ್ಲಿ ಭಾಗಿಯಾಗಿದ್ದೇವೆ ಎಂದು ಆರ್‌ಸಿಬಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.