ADVERTISEMENT

Bengaluru Stampede | ಆರ್‌ಸಿಬಿ, ಕೆಎಸ್‌ಸಿಎ ಸಿಲುಕಿಸಲು ಸರ್ಕಾರ ಯತ್ನ: ಅಶೋಕ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2025, 15:18 IST
Last Updated 20 ನವೆಂಬರ್ 2025, 15:18 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ‘ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಸಾವಿನ ಪ್ರಕರಣದಲ್ಲಿ ಆರ್‌ಸಿಬಿ ಹಾಗೂ ಕೆಎಸ್‌ಸಿಎ ಮೇಲೆ ಗೂಬೆ ಕೂರಿಸಲು ತನಿಖಾ ವರದಿ ಸಿದ್ಧಪಡಿಸಲಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ವರದಿಯಲ್ಲಿ ಯಾವುದೇ ಹುರುಳಿಲ್ಲ. 11 ಮಂದಿ ಅಮಾಯಕರ ಸಾವಿಗೆ ಸರ್ಕಾರವೇ ಕಾರಣ. ತನ್ನ ಹೊಣೆಗಾರಿಕೆ ಸರಿಯಾಗಿ ನಿಭಾಯಿಸದೆ ಎರಡು ಸಂಸ್ಥೆಗಳನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ವರದಿಯನ್ನು ಸಿದ್ಧಪಡಿಸಿದೆ. ಕಾಲ್ತುಳಿತದ ಘಟನೆಯ ನಂತರ ಯಾವುದೇ ಕ್ರಿಕೆಟ್‌ ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕಾಲ್ತುಳಿತ ಪ್ರಕರಣ, ಧರ್ಮಸ್ಥಳ ಘಟನೆಗಳನ್ನು ನಿರ್ವಹಿಸುವಲ್ಲಿ ಪೊಲೀಸ್‌ ಇಲಾಖೆ ಸಂಪೂರ್ಣ ವಿಫಲವಾಗಿದೆ. ಅಧಿಕಾರಕ್ಕಾಗಿ ಕಿತ್ತಾಡುತ್ತಿರುವ ಕಾಂಗ್ರೆಸ್‌ ನಾಯಕರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಪೊಲೀಸ್‌ ಇಲಾಖೆಯ ಮೇಲೆ ಯಾರಿಗೂ ನಿಯಂತ್ರಣವಿಲ್ಲ’ ಎಂದರು.

ADVERTISEMENT

‘ಧರ್ಮಸ್ಥಳ ಪ್ರಕರಣ ನಗರ ನಕ್ಸಲರು ಮಾಡಿರುವ ದೊಡ್ಡ ನಾಟಕ. ತಿಮರೋಡಿ ಗ್ಯಾಂಗ್‌ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಸರ್ಕಾರದ ಪರ ವಕೀಲರು ಸರಿಯಾಗಿ ವಾದ ಮಂಡಿಸಿಲ್ಲ. ತನಿಖೆಯೂ ಸರಿಯಾಗಿ ನಡೆದಿಲ್ಲ. ಕ್ಷೇತ್ರದ ಹೆಸರು ಕೆಡಿಸಿದವರ ವಿರುದ್ಧ ಕ್ರಮವಿಲ್ಲ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.