ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಮಂದಿ ಸತ್ತಿರುವುದಕ್ಕೆ ಈಗಲೂ ವಿಚಲಿತನಾಗಿದ್ದೇನೆ, ದುಃಖಪಡುತ್ತಿದ್ದೇನೆ. ಆ ಘಟನೆಗಾಗಿ ಮತ್ತೊಮ್ಮೆ ವಿಷಾದಿಸುತ್ತೇನೆ. 10 ವರ್ಷಗಳಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸಾಕಷ್ಟು ಬಾರಿ ಕಾಲ್ತುಳಿತ ಪ್ರಕರಣಗಳು ನಡೆದಿವೆ. ಆದರೆ, ಯಾವುದಾದರೂ ಮುಖ್ಯಮಂತ್ರಿ ರಾಜೀನಾಮೆ ನೀಡಿದ್ದಾರಾ ಮತ್ತು ಕ್ಷಮೆ ಕೇಳಿದ್ದಾರಾ? ಎಂದು ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್‌ಸಿಬಿ ನಮ್ಮ ತಂಡವಲ್ಲ, ಕರ್ನಾಟಕದ್ದೂ ಅಲ್ಲ, ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದಿದ್ದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.