
ಬೆಂಗಳೂರು: ‘ಬೆಂಗಳೂರು ರಾಯಲ್ ಚಾಲೆಂಜರ್ಸ್ (ಆರ್‌ಸಿಬಿ) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ವಿಚಾರಣಾ ಆಯೋಗ ಸಲ್ಲಿಸಿರುವ ವರದಿಯನ್ನು ರದ್ದುಗೊಳಿಸಬೇಕು’ ಎಂದು ಕೋರಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ‘ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್’ ನಿರ್ದೇಶಕ ಸುನಿಲ್ ಮ್ಯಾಥ್ಯೂ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಮತ್ತು ತಾರಾ ವಿತಸ್ತಾ ಗಂಜು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು.
‘ರಾಜ್ಯ ಸರ್ಕಾರದ ನಿಲುವನ್ನು ಪರಿಗಣಿಸಿ, ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂಬುದನ್ನು ಮನಗಂಡು ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ನ್ಯಾಯಪೀಠ ಆದೇಶಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ. ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.