ADVERTISEMENT

ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ: ಸಿಎಂ ಸಿದ್ದರಾಮಯ್ಯ

ಪ್ರೀತಿ-ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜೂನ್ 2025, 14:29 IST
Last Updated 4 ಜೂನ್ 2025, 14:29 IST
   

ಬೆಂಗಳೂರು: 'ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

'ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು' ಎಂದು ಹೇಳಿದ್ದಾರೆ.

'ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು. ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ' ಎಂದು ತಿಳಿಸಿದ್ದಾರೆ.

ADVERTISEMENT

'ಪ್ರೀತಿ-ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.