
ಪ್ರಜಾವಾಣಿ ವಾರ್ತೆ
ಡಾ.ಗಿರಿಧರ ಕಜೆ
ಬೆಂಗಳೂರು: ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷರಾಗಿ ಡಾ.ಗಿರಿಧರ ಕಜೆ ಅವರು ಹತ್ತನೇ ಬಾರಿಗೆ ಪುನರಾಯ್ಕೆ ಆಗಿದ್ದಾರೆ.
ನಗರದಲ್ಲಿ ನಡೆದ ಮಹಾಸಭೆಯ 81ನೇ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಮಹಾಸಭಾದ ಉಪಾಧ್ಯಕ್ಷರಾಗಿ ಆರ್.ಎಂ.ಹೆಗಡೆ ಬಾಳೆಸರ, ಶ್ರೀಧರ ಜೆ. ಭಟ್ಟ ಕೆಕ್ಕಾರು, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ. ವೇಣುವಿಘ್ನೇಶ ಸಂಪ, ಕಾರ್ಯದರ್ಶಿಗಳಾಗಿ ಪ್ರಶಾಂತ ಕುಮಾರ ಜಿ. ಭಟ್ಟ ಮಲವಳ್ಳಿ, ಆದಿತ್ಯ ಹೆಗಡೆ ಕಲಗಾರು, ಕೋಶಾಧಿಕಾರಿಯಾಗಿ ಕೃಷ್ಣಮೂರ್ತಿ ಎಸ್. ಭಟ್ ಯಲಹಂಕ ಆಯ್ಕೆಯಾಗಿದ್ದಾರೆ ಎಂದು ಮಹಾಸಭಾದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.