ADVERTISEMENT

ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳ ವರ್ಗಕ್ಕೆ ಶಿಫಾರಸು

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2025, 14:17 IST
Last Updated 21 ಏಪ್ರಿಲ್ 2025, 14:17 IST
ಹೈಕೋರ್ಟ್‌
ಹೈಕೋರ್ಟ್‌   

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನಾಲ್ವರು ಸೇರಿದಂತೆ ಏಳು ನ್ಯಾಯಮೂರ್ತಿಗಳ ವರ್ಗಾವಣೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಕರ್ನಾಟಕ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಕೆ. ನಟರಾಜನ್ ಅವರನ್ನು ಕೇರಳಕ್ಕೆ, ನ್ಯಾಯಮೂರ್ತಿ ಎನ್‌.ಎಸ್‌. ಸಂಜಯ್ ಗೌಡ ಅವರನ್ನು ಗುಜರಾತ್‌ಗೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನು ಒಡಿಸ್ಸಾ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಲಾಗಿದೆ. 

ಇದಲ್ಲದೆ, ತೆಲಂಗಾಣ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಪೆರುಗು ಶ್ರೀ ಸುಧಾ ಅವರನ್ನು ಕರ್ನಾಟಕಕ್ಕೆ ಮತ್ತು ಕೆ. ಸುರೇಂದರ್ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ, ಆಂಧ್ರಪ್ರದೇಶ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಕುಂಭಜದಲ ಮನ್ಮಧ ರಾವ್ ಅವರನ್ನು ಕರ್ನಾಟಕಕ್ಕೆ ವರ್ಗಾಯಿಸಲು ಶಿಫಾರಸು ಮಾಡಲಾಗಿದೆ. ಹೈಕೋರ್ಟ್‌ಗಳಲ್ಲಿ ಒಳಗೊಳ್ಳುವಿಕೆ, ವೈವಿಧ್ಯ ತುಂಬಲು ಮತ್ತು ನ್ಯಾಯಾಂಗದ ಆಡಳಿತದ ಗುಣಮಟ್ಟ ಹೆಚ್ಚಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೊಲಿಜಿಯಂ ತಿಳಿಸಿದೆ.

ADVERTISEMENT

ಏಪ್ರಿಲ್ 15 ಮತ್ತು ಏಪ್ರಿಲ್ 19ರಂದು ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.