ADVERTISEMENT

2,500 ಶಿಕ್ಷಕರ ನೇಮಕ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್‌

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2022, 15:58 IST
Last Updated 12 ಸೆಪ್ಟೆಂಬರ್ 2022, 15:58 IST
ಬಿ.ಸಿ.ನಾಗೇಶ್‌
ಬಿ.ಸಿ.ನಾಗೇಶ್‌   

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 2,500 ಶಿಕ್ಷಕರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಟ್ವೀಟ್‌ ಮಾಡಿದ್ದಾರೆ.

ರಾಜ್ಯದಲ್ಲಿ 4,736 ಸರ್ಕಾರಿ ಪ್ರೌಢಶಾಲೆಗಳಿವೆ. ಖಾಲಿ ಇರುವ 2,200 ಸಹಶಿಕ್ಷಕರು, 200 ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿಶೇಷ ಶಿಕ್ಷಕರ 100 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ರಾಜ್ಯದಲ್ಲಿ 17 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಂಡಿಲ್ಲ. ಬಿ‍.ಪಿ.ಇಡಿ, ಡಿ.ಪಿ.ಇಡಿ ತರಬೇತಿ ಪಡೆದ ಸಾವಿರಾರು ಆಕಾಂಕ್ಷಿಗಳು ನೇಮಕಾತಿಗಾಗಿ ಆಗ್ರಹಿಸಿ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.