ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಕ್ರಮಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಆಯ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸರ್ಕಾರಕ್ಕೆ ಸಲ್ಲಿಸಿದೆ. ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ. ಬೇರೆ ಯಾವ ಪ್ರಕರಣಗಳೂ ಬಾಕಿ ಉಳಿದಿಲ್ಲ. ಹಾಗಾಗಿ, ನಿಯಮಾನುಸಾರ ನೇಮಕಾತಿ ಆದೇಶ ಹೊರಡಿಸುವಂತೆ ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.