ಸಾಂದರ್ಭಿಕ ಚಿತ್ರ
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1,242 ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ನೀಡುವ ಕುರಿತು ಇರುವ ಸಮಸ್ಯೆಗಳನ್ನು ಚರ್ಚಿಸಲು ಆ. 1ರಂದು ಮಧ್ಯಾಹ್ನ 3ಕ್ಕೆ ಸಭೆ ಕರೆಯಲಾಗಿದೆ.
ವಿಕಾಸಸೌಧದಲ್ಲಿ ನಡೆಯುವ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹಾಗೂ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಶ್ರೀಕರ್ ಭಾಗವಹಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.