ADVERTISEMENT

ನೇಮಕಾತಿ ಅಕ್ರಮ: ನಾಲ್ವರು ಸಹ ಶಿಕ್ಷಕರ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2022, 18:16 IST
Last Updated 10 ಸೆಪ್ಟೆಂಬರ್ 2022, 18:16 IST

ಬೆಂಗಳೂರು: 2014–15ನೇ ಸಾಲಿನ ಪ್ರೌಢಶಾಲೆಗಳ ಗ್ರೇಡ್–2 ಸಹಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ನಾಲ್ವರು ಸಹ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಶನಿವಾರ ವಿಚಾರಣೆ ನಡೆಸಿದ್ದು, ಸೋಮವಾರ ಪುನಃ ಬರುವಂತೆ ಸೂಚಿಸಿದ್ದಾರೆ.

ವಿಧಾನಸೌಧ ಠಾಣೆಯಲ್ಲಿ ದಾಖಲಾ ಗಿರುವ ಪ್ರಕರಣದಲ್ಲಿ ಈಗಾಗಲೇ 12 ಸಹಶಿಕ್ಷಕರನ್ನು ಬಂಧಿಸಿರುವ ಸಿಐಡಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ಎಲ್ಲರನ್ನೂ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಜೊತೆಗೆ, ಮತ್ತಷ್ಟು ಸಹ ಶಿಕ್ಷಕರು ಹಾಗೂ ಇತರರಿಗೆ ನೋಟಿಸ್ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.