ಬೆಂಗಳೂರು: ಈಗಾಗಲೇ ಯುಜಿ-ಸಿಇಟಿಗೆ ಅರ್ಜಿ ಸಲ್ಲಿಸಿರುವ, ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ಲಿಂಕ್ ಬಿಡುಗಡೆ ಮಾಡಲಿದೆ.
‘ಆ. 5ರಂದು ಬೆಳಿಗ್ಗೆ 11ಕ್ಕೆ ಕೆಇಎ ವೆಬ್‌ಸೈಟ್‌ನಲ್ಲಿ ಯುಜಿ ನೀಟ್ -2024 ಲಿಂಕ್ ಬಿಡುಗಡೆ ಮಾಡಲಾಗುವುದು. 7ರಂದು ಬೆಳಿಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಬಹುದು’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಅನ್ನು ಎನ್‌ಟಿಎ ಡಾಟಾದೊಂದಿಗೆ ತಾಳೆ ಮಾಡಿ ಯುಜಿ ನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ವೆರಿಫಿಕೇಷನ್ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದಿದ್ದಾರೆ.
ಹೊಸದಾಗಿ ಅರ್ಜಿ ಸಲ್ಲಿಸಲು 7ರಿಂದ ಅವಕಾಶ: ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದು, ಇನ್ನೂ ಅರ್ಜಿ ಸಲ್ಲಿಸದವರು ಆ.7ರಿಂದ 9ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್ ವೀಕ್ಷಿಸಬಹುದು ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.