ಬೆಂಗಳೂರು: ರಾಜ್ಯದಲ್ಲಿನ ಪೂರ್ವ ಪ್ರಾಥಮಿಕ ಶಾಲೆಗಳಿಗೆ ನೋಂದಣಿ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಎಸ್‌ಎಟಿಎಸ್ ಪೋರ್ಟಲ್‌ನಲ್ಲಿ ಹೊಸ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗಿದ್ದು, ಪ್ಲೇ ಹೋಂ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಎಲ್ಲ ಪೂರ್ವ ಪ್ರಾಥಮಿಕ ಶಾಲೆಗಳನ್ನು ನಡೆಸುವವರು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳದ ಪೂರ್ವ ಪ್ರಾಥಮಿಕ ಶಾಲೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಶಾಲೆ ನಡೆಸುವವರು ಮೂರು ತಿಂಗಳ ಮುಂಚಿತವಾಗಿ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಮೂಲಕ ನೋಂದಾಯಿಸಿಕೊಳ್ಳಬೇಕು. ಪ್ರತಿ ಮಗುವಿಗೆ ಒಂದು ಚದರ ಮೀಟರ್ ಸ್ಥಳಾವಕಾಶ ಕಡ್ಡಾಯವಾಗಿದೆ. 30 ವರ್ಷಗಳ ಅವಧಿಗೆ ಸ್ವಂತ ಕಟ್ಟಡ ಅಥವಾ ಗುತ್ತಿಗೆ ಹೊಂದಿರಬೇಕು. ಬಿಬಿಎಂಪಿ ವ್ಯಾಪ್ತಿಯ ಶಾಲೆಗೆ ₹15,000, ಇತರೆ ನಗರ ಪ್ರದೇಶಗಳಿಗೆ ₹7,500 ಮತ್ತು ಗ್ರಾಮೀಣ ಪ್ರದೇಶಗಳಿಗೆ ₹2,500 ನೋಂದಣಿ ಶುಲ್ಕ ನಿಗದಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.