ADVERTISEMENT

ಕನ್ನಡ ಹೋರಾಟಗಾರರನ್ನು ಬಿಡುಗಡೆ ಮಾಡಿ: ನೆಟ್ಟಿಗರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2019, 11:53 IST
Last Updated 19 ಆಗಸ್ಟ್ 2019, 11:53 IST
   

ಬೆಂಗಳೂರು: ಜೈನ ಸಮುದಾಯದವರ ‘ಗಣೇಶ್‌ ಬಾಗ್’ ಕಟ್ಟಡದ ಪ್ರವೇಶ ದ್ವಾರದಲ್ಲಿ ಹಾಕಿದ್ದ ‘ಹಿಂದಿ’ ಕಟೌಟ್‌ ಅನ್ನು ಕಿತ್ತುಹಾಕಿದ ಪ್ರಕರಣದಲ್ಲಿ ಬಂಧಿತರಾಗಿರುವ ಕರ್ನಾಟಕ ರಕ್ಷಣಾ ಸೇನೆಸಂಘಟನೆಯ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ನೆಟ್ಟಿಗರು ಒತ್ತಾಯಿಸಿದ್ದಾರೆ.

ಇದೀಗ ಟ್ವಿಟರ್‌ನಲ್ಲಿ #ReleaseKannadaActivists ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಮಾನ್ಯ ಮುಖ್ಯಮಂತ್ರಿಗಳೇ ಕನ್ನಡ ಪರ ಹೋರಾಟಗಾರರ ‌ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಿರಿ. ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ತೋರಿಸಿ ಎಂದಿದ್ದಾರೆ.

ADVERTISEMENT

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಹೋರಾಟಕ್ಕೆ ಧರ್ಮ ಮತ್ತು ರಾಜಕೀಯದ ಬಣ್ಣ ಬಳಿದು ಪೊಲೀಸರ ಮೂಲಕ ಕನ್ನಡ ಹೋರಾಟಗಾರರನ್ನು ಹತ್ತಿಕ್ಕುವ ರಾಜ್ಯ ಸರ್ಕಾರದ ನಡೆ ಖಂಡನೀಯ.
ಬಂಧಿತ ಕನ್ನಡ ಹೋರಾಟಗಾರರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಟ್ವೀಟಿಸಿದ್ದಾರೆ.

ಅದೇ ವೇಳೆ ರಾಜ್ಯದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಇಂದು ಸಂಜೆ 5.30ಕ್ಕೆ ಟೌನ್‌ಹಾಲ್ ಮುಂದೆ ಪ್ರತಿಭಟನೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.