ADVERTISEMENT

ಖಾಸಗಿ ಶಾಲೆಗಳಿಗೆ ಆರ್‌‌ಟಿ‌ಇ ಶುಲ್ಕ ಬಿಡುಗಡೆ ಮಾಡಿ: ಮುಖ್ಯಮಂತ್ರಿಗಳಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಮೇ 2020, 9:47 IST
Last Updated 16 ಮೇ 2020, 9:47 IST
ಖಾಸಗಿ ಶಾಲೆಗಳಿಗೆ ಆರ್‌ಟಿಇ ಶುಲ್ಕ ಬಿಡುಗಡೆ ಮಾಡಬೇಕೆಂದು ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಖಾಸಗಿ ಶಾಲೆಗಳಿಗೆ ಆರ್‌ಟಿಇ ಶುಲ್ಕ ಬಿಡುಗಡೆ ಮಾಡಬೇಕೆಂದು ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.   
""

ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದಾಗಿ ಖಾಸಗಿ ಶಾಲೆಗಳು ಬಹಳ ಸಂಕಷ್ಟದಲ್ಲಿ ಇದ್ದು, ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಸರ್ಕಾರ ಪಾವತಿಸಬೇಕಾದ ಶುಲ್ಕವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್‌ನ ಶಿಕ್ಷಕರು ಮತ್ತು ಪದವೀಧರ ಕ್ಷೇತಗರಗಳಿಂದ ಆಯ್ಕೆಯಾದ ಸದಸ್ಯರು ಪಕ್ಷಭೇದ ಮರೆತು ಒತ್ತಾಯಿಸಿದರು.

ಶನಿವಾರ ಇಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೆದ ಸಭೆಯಲ್ಲಿ ಈ ಇತ್ತಾಯ ಮಾಡಲಾಯಿತು.ಅನುದಾನ ರಹಿತ ಶಿಕ್ಷಕರಿಗೆ ಕೋವಿಡ್ ನಿಂದ ಸಂಬಳ ಆಗದೆ ಇರುವುದರಿಂದ ಅವರಿಗೆ ಸಹ ವಿಶೇಷ ಪ್ಯಾಕೇಜ್ ನೀಡಬೇಕು. ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಬಡ್ಡಿ ರಹಿತ ಸಾಲವನ್ನು ನೀಡಬೇಕು. ಬಡ ಶಿಕ್ಷಕರಿಗೆ ಆಹಾರ ಕಿಟ್ ನೀಡಬೇಕು ಎಂದು ಸಹ ಒತ್ತಾಯಿಸಲಾಯಿತು.

ಮುಖ್ಯಮಂತ್ರಿ ಭರವಸೆ:ಈಗಾಗಲೇ ಆರ್ ಟಿ ಐ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ.
ಎಲ್ಲಾ‌ ಶಾಲಾ ಕಾಲೇಜುಗಳಿಗೂಸಂಬಳ ಬಿಡುಗಡೆ ಮಾಡಲು ಸೂಚನೆ ನೀಡಲಾಗುವುದು.ಬಡ ಶಿಕ್ಷಕರಿಗೆ ಕಿಟ್ ಕೊಡಲು ಕೂಡಲೇ‌ ನಿರ್ದೇಶನ ನೀಡಲಾಗುವುದು.ಉಳಿದ ಬೇಡಿಕೆಗಳನ್ನು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಬಗೆಹರಿಸುತ್ತೇನೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ADVERTISEMENT
ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.