ADVERTISEMENT

ಧರ್ಮದಿಂದ ವಿಶ್ವಶಾಂತಿ ಕಾಪಾಡಲು ಸಾಧ್ಯ: ಬಸವರಾಜ ಬೊಮ್ಮಾಯಿ

ರಂಭಾಪುರಿ ಪೀಠ: ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 19:56 IST
Last Updated 5 ಮಾರ್ಚ್ 2023, 19:56 IST
ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ, ಬೆಂಗಳೂರಿನ ಮುಕ್ತಿಮಂದಿರದ ಅಧ್ಯಕ್ಷ ವಿಮಲ ರೇಣುಕ ವೀರಮುಕ್ತಿ ಸ್ವಾಮೀಜಿ, ಹಂಪಸಾಗರದ ನವಲಿ ಹಿರೇಮಠದ ಶಿವಲಿಂಗ ರುದ್ರಮುನಿ ಸ್ವಾಮೀಜಿ, ಬಾಳೆಹೊನ್ನೂರಿನ ಜುಕ್ತಿ ಹಿರೇಮಠದ ಕೊಟ್ಟೂರು ಬಸವೇಶ್ವರ ಸ್ವಾಮೀಜಿ ಇದ್ದರು.

ಚಿಕ್ಕಮಗಳೂರು: ‘ಧರ್ಮದಿಂದ ವಿಶ್ವಶಾಂತಿ ಕಾಪಾಡಲು ಸಾಧ್ಯ. ‘ಎಲ್ಲರೂ ನಮ್ಮವರು’ ಎಂಬ ಬಸವಣ್ಣನವರ ಸಂದೇಶವನ್ನು ಪಾಲಿಸಬೇಕು. ಸಮಾನ ಅವಕಾಶಗಳ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ವೀರಭದ್ರಸ್ವಾಮಿ ರಥೋತ್ಸವ, ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭ, ಶಿವಾದ್ವೈತ ಧರ್ಮ ಸಮ್ಮೇಳನದಲ್ಲಿ ಅವರು ಮಾತನಾಡಿದರು.

‘ಬಿ.ಎಸ್‌. ಯಡಿಯೂರಪ್ಪ ಅವರ ಹೋರಾಟಕ್ಕೆ ಸಲ್ಲಬೇಕಾದಷ್ಟು ನ್ಯಾಯ ಅವರಿಗೆ ಸಿಕ್ಕಿಲ್ಲ. ಅವರನ್ನು ಹಿಂದಕ್ಕೆ ತಳ್ಳುವ ಷಡ್ಯಂತ್ರಗಳು ನಿರಂತರವಾಗಿ ನಡೆದವು. ಷಡ್ಯಂತ್ರಗಳಿಗೆ ಜಗ್ಗದೆ ಬಗ್ಗದೆ ಬೆಳೆದರು. ಅವರಿಗೆ ರೇಣುಕಾಚಾರ್ಯ ಪ್ರಶಸ್ತಿ ನೀಡಿರುವುದು ಖುಷಿ ತಂದಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.