ADVERTISEMENT

ಧಾರ್ಮಿಕ ಸಭೆ, ಸಮಾರಂಭಗಳಿಗೆ ಅನುಮತಿ ಇಲ್ಲ: ಕೋರ್ಟ್‌ಗೆ ಸರ್ಕಾರದ ಮಾಹಿತಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2020, 16:38 IST
Last Updated 13 ಏಪ್ರಿಲ್ 2020, 16:38 IST
   

ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಸಲು ಅನುಮತಿ ನೀಡದಂತೆ ನಿರ್ದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಮಾಹಿತಿ ನೀಡಿದ್ದಾರೆ.

"ಈ ಸಂಬಂಧ ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ವಲಯ ಐಜಿಪಿ ಮತ್ತು ಎಲ್ಲಾ ಘಟಕದ ಅಧಿಕಾರಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಇದೇ 10ರಂದು ಸುತ್ತೋಲೆ ಹೊರಡಿಸಿ ನಿರ್ದೇಶನ ನೀಡಿದ್ದಾರೆ" ಎಂದು ವಿವರಿಸಿದ್ದಾರೆ.

"ಕೇಂದ್ರ ಗೃಹ ಸಚಿವಾಲಯ ಮಾರ್ಚ್ 10ರಂದು ಹೊರಡಿಸಿದ ಮಾರ್ಗಸೂಚಿ ಅನ್ವಯ ಧಾರ್ಮಿಕ ಸಭೆ, ಸಮಾರಂಭ ಹಾಗೂ ಜನಸಂದಣಿಯನ್ನು ಕಟ್ಟು ನಿಟ್ಟಾಗಿ ನಿರ್ಬಂಧಿಸಲಾಗಿದೆ. ಲಾಕ್‌ಡೌನ್ ಉಲ್ಲಂಘನೆ ಪ್ರಕರಣಗಳ ವಿಚಾರದಲ್ಲಿ ರಾಜ್ಯ ಸರ್ಕಾರ ‘ಶೂನ್ಯ ಸಹನೆ’ (ಝಿರೋ ಟಾಲರೆನ್ಸ್) ಹೊಂದಿರಬೇಕು. ಈ ಆದೇಶ ಜಾರಿಗೆ ಸ್ಥಳೀಯ ಪೊಲೀಸರಿಗೆ ಅನುಕೂಲವಾಗುವಂತೆ ಸುತ್ತೋಲೆ ಹೊರಡಿಸಿ" ಎಂದು ಸರ್ಕಾರ ಹಾಗೂ ಡಿಜಿಪಿಗೆ ಹೈಕೋರ್ಟ್ ಇದೇ 9ರಂದು ಆದೇಶಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.