ಬೆಂಗಳೂರು: ನವೀಕರಿಸಬಹುದಾದ ಇಂಧನ ಘಟಕಗಳ ಸ್ಥಾಪನೆಗೆ ಕೃಷಿ ಭೂಮಿಯನ್ನು ಸ್ವಯಂಚಾಲಿತವಾಗಿ ಪರಿವರ್ತನೆ ಮಾಡುವ ನೂತನ ತಂತ್ರಾಂಶಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಚಾಲನೆ ನೀಡಿದರು.
ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ನವೀಕರಿಸಬಹುದಾದ ಇಂಧನ ಘಟಕಗಳ ಸ್ಥಾಪನೆಗಾಗಿ ಭೂಪರಿವರ್ತನೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಈ ತಂತ್ರಾಂಶ ಜಾರಿಗೆ ತರಲಾಗಿದೆ. ಈ ಮೂಲಕ ಈ ಕ್ಷೇತ್ರದಲ್ಲಿ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ’ ಎಂದರು.
‘ಕರ್ನಾಟಕ ಆರಂಭದಿಂದಲೂ ನವೀಕರಿಸಬಹುದಾದ ಇಂಧನಗಳ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಈ ಘಟಕಗಳ ಸ್ಥಾಪನೆಗೆ ಈ ಹಿಂದೆ ಭೂ ಪರಿವರ್ತನೆ ಕಡ್ಡಾಯವಾಗಿತ್ತು. ಭೂ ಪರಿವರ್ತನೆಗೆ ಕನಿಷ್ಠ 6 ತಿಂಗಳು ಸಮಯ ತೆಗೆದುಕೊಳ್ಳುತ್ತಿತ್ತು. ಇದರಿಂದ ಮಧ್ಯವರ್ತಿಗಳು ಲಾಭ ಪಡೆಯುತ್ತಿದ್ದರು. ಭ್ರಷ್ಟಾಚಾರ ಎಲ್ಲೆ ಮೀರಿತ್ತು. ಇದರಿಂದ ಅಧಿಕಾರಿಗಳು ಲಾಭ ಪಡೆದರೋ ಅಥವಾ ಮಧ್ಯವರ್ತಿಗಳು ಲಾಭ ಪಡೆದರೋ ಗೊತ್ತಿಲ್ಲ. ಆದರೆ, ಸರ್ಕಾರಕ್ಕೆ ಮಾತ್ರ ಕೆಟ್ಟ ಹೆಸರು ಬರುತ್ತಿತ್ತು’ ಎಂದು ಹೇಳಿದರು.
‘ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಉದ್ದೇಶದಿಂದಲೇ ಈ ವ್ಯವಸ್ಥೆ ತರಲಾಗಿದೆ. ಪ್ರಮಾಣ ಪತ್ರದ ಆಧಾರದಲ್ಲಿ ಸ್ವಯಂಚಾಲಿತ ಭೂಪರಿವರ್ತನಾ ವ್ಯವಸ್ಥೆ ಕಾರ್ಯನಿರ್ವಹಿಸಲಿದೆ. ಇದನ್ನು ದುರುಪಯೋಗ ಮಾಡಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಕ್ಕೂ ನಿಯಮಗಳನ್ನು ರೂಪಿಸಲಾಗಿದೆ’ ಎಂದು ವಿವರಿಸಿದರು.
‘ನವೀಕರಿಸಬಹುದಾದ ಮೂಲಗಳ ವಿದ್ಯುತ್ ಉತ್ಪಾದನೆಯಲ್ಲಿ ಗುಜರಾತ್ ಮತ್ತು ರಾಜಸ್ಥಾನ ಮೊದಲ ಸ್ಥಾನದಲ್ಲಿವೆ ಎಂದು ದಾಖಲೆಗಳು ಹೇಳುತ್ತವೆ. ಅಲ್ಲಿ ಕೃಷಿ ಮತ್ತು ವಾಸ ಯೋಗ್ಯವಲ್ಲದ ಭೂಮಿಯಲ್ಲಿ ಅಂತಹ ಘಟಕಗಳನ್ನು ಸ್ಥಾಪಿಸಲಾಗಿದೆ. ಆದರೆ ಕರ್ನಾಟಕದಲ್ಲಿ ನಾವು ಕೃಷಿ ಭೂಮಿಯನ್ನು ಬಳಸಿಕೊಂಡೇ ಗಣನೀಯ ಪ್ರಮಾಣದಲ್ಲಿ ನವೀಕರಿಸಬಹುದಾದ ಮೂಲಗಳ ವಿದ್ಯುತ್ ಉತ್ಪಾದಿಸುತ್ತಿದ್ದೇವೆ’ ಎಂದರು.
ಇದರಿಂದ ಮಧ್ಯವರ್ತಿಗಳು ಲಾಭ ಪಡೆಯುತ್ತಿದ್ದರು. ಭ್ರಷ್ಟಾಚಾರ ಎಲ್ಲೆ ಮೀರಿತ್ತು. ಇದರಿಂದ ಅಧಿಕಾರಿಗಳು ಲಾಭ ಪಡೆದರೋ ಅಥವಾ ಮಧ್ಯವರ್ತಿಗಳು ಲಾಭ ಪಡೆದರೋ ಗೊತ್ತಿಲ್ಲ. ಆದರೆ, ಸರ್ಕಾರಕ್ಕೆ ಮಾತ್ರ ಕೆಟ್ಟ ಹೆಸರು ಬರುತ್ತಿತ್ತು’ ಎಂದು ಹೇಳಿದರು.
‘ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಉದ್ದೇಶದಿಂದಲೇ ಈ ವ್ಯವಸ್ಥೆ ತರಲಾಗಿದೆ. ಪ್ರಮಾಣ ಪತ್ರದ ಆಧಾರದಲ್ಲಿ ಸ್ವಯಂಚಾಲಿತ ಭೂಪರಿವರ್ತನಾ ವ್ಯವಸ್ಥೆ ಕಾರ್ಯನಿರ್ವಹಿಸಲಿದೆ. ಇದನ್ನು ದುರುಪಯೋಗ ಮಾಡಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಕ್ಕೂ ನಿಯಮಗಳನ್ನು ರೂಪಿಸಲಾಗಿದೆ’ ಎಂದು ವಿವರಿಸಿದರು.
‘ನವೀಕರಿಸಬಹುದಾದ ಮೂಲಗಳ ವಿದ್ಯುತ್ ಉತ್ಪಾದನೆಯಲ್ಲಿ ಗುಜರಾತ್ ಮತ್ತು ರಾಜಸ್ಥಾನ ಮೊದಲ ಸ್ಥಾನದಲ್ಲಿವೆ ಎಂದು ದಾಖಲೆಗಳು ಹೇಳುತ್ತವೆ. ಅಲ್ಲಿ ಕೃಷಿ ಮತ್ತು ವಾಸ ಯೋಗ್ಯವಲ್ಲದ ಭೂಮಿಯಲ್ಲಿ ಅಂತಹ ಘಟಕಗಳನ್ನು ಸ್ಥಾಪಿಸಲಾಗಿದೆ. ಆದರೆ ಕರ್ನಾಟಕದಲ್ಲಿ ನಾವು ಕೃಷಿ ಭೂಮಿಯನ್ನು ಬಳಸಿಕೊಂಡೇ ಗಣನೀಯ ಪ್ರಮಾಣದಲ್ಲಿ ನವೀಕರಿಸಬಹುದಾದ ಮೂಲಗಳ ವಿದ್ಯುತ್ ಉತ್ಪಾದಿಸುತ್ತಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.