ADVERTISEMENT

ನವೀಕರಿಸಬಹುದಾದ ಇಂಧನ ನೀತಿ ಜಾರಿ: ಸರ್ಕಾರದ ಚಿಂತನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 19:03 IST
Last Updated 28 ಸೆಪ್ಟೆಂಬರ್ 2021, 19:03 IST

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ನವೀಕರಿಸಬಹುದಾದ ಇಂಧನ ನೀತಿ ಜಾರಿಗೊಳಿಸುವ ಕುರಿತು ಇಂಧನ ಇಲಾಖೆ ಗಂಭೀರ ಚಿಂತನೆ ನಡೆಸಿದೆ.

ಇಂಧನ ಸಚಿವ ವಿ. ಸುನಿಲ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ನಡೆಸಿದ ಸಭೆಯಲ್ಲಿ ಈ ನೀತಿ ಬಗ್ಗೆ ವಿಸ್ತೃತ ಚರ್ಚೆ
ನಡೆದಿದೆ.

‘ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತೇಜನ, ಉದ್ಯೋಗ ಅವಕಾಶ ಸೃಷ್ಟಿಸುವ ಜೊತೆಗೆ ಹಸಿರು ಇಂಧನದ ಉತ್ಪಾದನೆ, ಬಳಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನೀತಿ ರೂಪಿಸುವ ಬಗ್ಗೆ ಚರ್ಚೆ ನಡೆಯಿತು. ಇದರಿಂದ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅವಲಂಬನೆ ಪ್ರಮಾಣ ತಗ್ಗಿಸಲು ಕೂಡಾ ಸಭೆಯಲ್ಲಿ ವಿಚಾರ ವಿನಿಮಯ ನಡೆಯಿತು ಎಂದು ಮೂಲಗಳು
ತಿಳಿಸಿವೆ.

ADVERTISEMENT

ಸಚಿವರಾಗಿ ಅಧಿಕಾರ ವಹಿಸಿಕೊಂಡ ಆರಂಭದ 100 ದಿನದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಮುಖ್ಯಮಂತ್ರಿಗೆ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದರು. ಹಂತ ಹಂತವಾಗಿ ಇಂಧನ ಇಲಾಖೆಯಲ್ಲಿ ದಕ್ಷತೆ ಹೆಚ್ಚಿಸಿ ಪರಿಣಾಮಕಾರಿಯಾಗಿ ವಿದ್ಯುತ್ ನಿರ್ವಹಣೆಗೆ ಕ್ರಮ ವಹಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.

ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.