ADVERTISEMENT

ಮಾರ್ಚ್‌ 16ಕ್ಕೆ ರೇಣುಕಾಚಾರ್ಯರ ಜಯಂತಿ: ಸರ್ಕಾರ ಆದೇಶ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2022, 19:33 IST
Last Updated 25 ಮಾರ್ಚ್ 2022, 19:33 IST
ರೇಣುಕಾಚಾರ್ಯರು
ರೇಣುಕಾಚಾರ್ಯರು   

ಬೆಂಗಳೂರು: ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಮಾರ್ಚ್‌ 16 ರಂದು ರಾಜ್ಯದಾದ್ಯಂತ ಸರ್ಕಾರದ ವತಿಯಿಂದ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದೆ.

ರೇಣುಚಾಚಾರ್ಯರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್‌ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆಯ ಬದುಕನ್ನು ಬೋಧಿಸಿದ್ದಾರೆ. ದಕ್ಷಿಣ ಭಾರತದಾದ್ಯಂತ ಲಕ್ಷಾಂತರ ಭಕ್ತ ಸಮೂಹವನ್ನು ರೇಣುಕಾಚಾರ್ಯರು ಹೊಂದಿದ್ದಾರೆ. ಇವರ ಜಯಂತಿ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT