ರೇಣುಕಸ್ವಾಮಿ, ದರ್ಶನ್
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದರು.
ಈ ಕುರಿತು ಗೃಹ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪೂರ್ವಾನುಮತಿ ದೊರೆತ ಬಳಿಕ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.
ಕೋವಿಡ್ ನಿರ್ವಹಣೆ ವೇಳೆ ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ತನಿಖೆಯನ್ನು ವಿಧಾನಸೌಧ ಠಾಣೆ ಪೊಲೀಸರು ನಡೆಸುತ್ತಿದ್ದಾರೆ. ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿಲ್ಲ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.