
ಪ್ರಜಾವಾಣಿ ವಾರ್ತೆ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿ ಇರುವ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಹಾಗೂ ಸಹಚರರ ಜಾಮೀನು ಅರ್ಜಿಯ ಭವಿಷ್ಯ ಇನ್ನು ಕೆಲವೇ ಹೊತ್ತಿನಲ್ಲಿ ಪ್ರಕಟವಾಗಲಿದೆ.
ಕಳೆದ ವಾರ ಜಾಮೀನು ಅರ್ಜಿಯ ಮೇಲೆ ವಾದ ಪ್ರತಿವಾದ ನಡೆದಿತ್ತು. 57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರು ವಾದ ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ್ದರು. ಆದೇಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.