ಪವಿತ್ರಾ ಗೌಡ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಪ್ರದೂಷ್ ಅವರು ಮಂಗಳವಾರ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು.
ಈ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಮೊದಲನೇ ಆರೋಪಿ ಆಗಿದ್ದಾರೆ. ಟೆಕಿ ಪ್ರದೂಷ್ ಅವರು ನಾಲ್ಕನೇ ಆರೋಪಿ ಆಗಿದ್ದಾರೆ. ಇಬ್ಬರೂ ಜೂನ್ 20ರಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದರು.
ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ಶುಕ್ರವಾರ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದರ್ಶನ್ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.