ಸಿಎಂ ಸಿದ್ದರಾಮಯ್ಯ
ಬೆಂಗಳೂರು: 'ರೇಣುಕಸ್ವಾಮಿ ಕೊಲೆ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್.ಪಿ ಪಿ) ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ .ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಪಿ ಪಿ ಅವರನ್ನು ಬದಲಾಯಿಸಲು ಒತ್ತಡ ಹೇರಲಾಗುತ್ತಿದೆ ಎಂಬುದರ ಕುರಿತು ಮಾಧ್ಯಮದವರ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, 'ಅಂತಹ ಪ್ರಸ್ತಾವವೇ ನನ್ನ ಮುಂದಿಲ್ಲ' ಎಂದರು.
ಕಾನೂನಿನ ಪ್ರಕಾರ ಕ್ರಮ
'ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು. ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ' ಎಂದರು.
ಪೊಲೀಸರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.