
ಪ್ರಜಾವಾಣಿ ವಾರ್ತೆ
ಪವಿತ್ರಾ ಗೌಡ
ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು ಮಾಡಿರುವ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಆರೋಪಿ ಪವಿತ್ರಾ ಗೌಡ ಅವರು ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 14ರಂದು ರದ್ದುಗೊಳಿಸಿತ್ತು. ಮರು ಪರಿಶೀಲನಾ ಅರ್ಜಿಯು ನ್ಯಾಯಮೂರ್ತಿ ಜೆ.ಬಿ.ಪಾರ್ದೀವಾಲಾ ಪೀಠದಲ್ಲಿ ಗುರುವಾರ ವಿಚಾರಣೆಗೆ ಬರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.