ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 19:46 IST
Last Updated 10 ನವೆಂಬರ್ 2025, 19:46 IST
ಪವಿತ್ರಾ ಗೌಡ
ಪವಿತ್ರಾ ಗೌಡ   

ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು ಪ್ರಶ್ನಿಸಿ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. 

ಸುಪ್ರೀಂ ಕೋರ್ಟ್‌ ಆಗಸ್ಟ್‌ 14ರಂದು ನೀಡಿದ್ದ ತೀರ್ಪು ಪ್ರಶ್ನಿಸಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದರು. ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಇತರ ಜಾಮೀನನ್ನು ನ್ಯಾಯಪೀಠ ರದ್ದುಗೊಳಿಸಿತ್ತು. 

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಹಾಗೂ ಆರ್. ಮಹದೇವನ್‌ ಪೀಠವು, ‘ನಾವು ತೀರ್ಪು ಹಾಗೂ ದಾಖಲೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದೇವೆ. ನಮ್ಮ ಅಭಿಪ್ರಾಯದಲ್ಲಿ ಜಾಮೀನು ರದ್ದು ಮರುಪರಿಶೀಲನೆಗೆ ಯಾವುದೇ ಆಧಾರಗಳಿಲ್ಲ. ಹೀಗಾಗಿ, ಮರು ಪರಿಶೀಲನಾ ಅರ್ಜಿ ವಜಾಗೊಳಿಸಲಾಗಿದೆ‘ ಎಂದು ಹೇಳಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.