ADVERTISEMENT

Republic Day: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹಲೋತ್ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 6:24 IST
Last Updated 26 ಜನವರಿ 2023, 6:24 IST
   

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು, ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ಬಳಿಕ ಗೌರವ ವಂದನೆ ಸ್ವೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹಲೋತ್, ಜನರನ್ನು ಉದ್ದೇಶಿಸಿ ಮಾತನಾಡಿದರು.

ಇದಾದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

ADVERTISEMENT

ಇದನ್ನೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲರನ್ನು ಬರಮಾಡಿಕೊಂಡರು.

74ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನಾಡಿನ ಜನೆತೆಗೆ ಮುಖ್ಯಮಂತ್ರಿ ಬೊಮ್ಮಾಯಿ ಶುಭಾಶಯಗಳನ್ನು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.