ಬೆಂಗಳೂರು: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥೇವರ್ ಚಂದ್ ಗೆಹಲೋತ್ ಅವರು ಧ್ವಜಾರೋಹಣ ನೆರವೇರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಭಾಷಣ ಪೂರ್ತಿ ಓದಿದ ರಾಜ್ಯಪಾಲ
ಕಳೆದ ವಾರ ವಿಧಾನಮಂಡಲ ಅಧಿವೇಶನದ ವೇಳೆ ಸರ್ಕಾರದ ಭಾಷಣದ ಮೊದಲ ಹಾಗೂ ಕೊನೆಯ ಸಾಲು ಓದಿ ನಿರ್ಗಮಿಸುವ ಮೂಲಕ, ಗದ್ದಲಕ್ಕೆ ಕಾರಣವಾಗಿದ್ದ ರಾಜ್ಯಪಾಲರು ಇಲ್ಲಿ ಸಂಪೂರ್ಣ ಭಾಷಣ ಓದಿದರು.
ಒಟ್ಟು 24 ಪುಟಗಳಿದ್ದ ಭಾಷಣವನ್ನು 20 ನಿಮಿಷಗಳಲ್ಲಿ ಹಿಂದಿಯಲ್ಲಿ ಓದಿದರು.
ನಮ್ಮ ಸರ್ಕಾರದ ಕಾರ್ಯಕ್ರಮ ಎಂದು ಭಾಷಣದಲ್ಲಿರುವ ಅಂಶಗಳನ್ನು ಉಲ್ಲೇಖಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.