ತುಮಕೂರು ನಗರದ ಮಹಾತ್ಮ ಗಾಂಧೀಜಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ
ಧಾರವಾಡದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್
ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು
ಹೊಸಪೇಟೆಯ ಪುನೀತ್ ರಾಜ್‍ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು
ಗೌರವ ನಮನ ಸ್ವೀಕರಿಸಿದ ಸಚಿವ ಸಂತೋಷ್ ಲಾಡ್
ಬೆಳಗಾವಿಯಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆಯೋಜಿಸಿದ್ದ ಸ್ತಬ್ದಚಿತ್ರಗಳ ಮೆರವಣಿಗೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಚಿತ್ರ ತೆಗೆಸಿಕೊಂಡಿದ್ದು ಹೀಗೆ
ಬೆಳಗಾವಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಸತೀಶ ಜಾರಕಿಹೊಳಿ
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು
ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಧ್ವಜಾರೋಹಣ ನೆರವೇರಿಸಿದರು
ಕಲಬುರಗಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಬೀದರ್‌ನಲ್ಲಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ ನೆರವೇರಿಸಿದರು
ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರು ಧ್ವಜಾರೋಹಣ ನೆರವೇರಿಸಿದರು
ಉಡುಪಿಯ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು
ಶಾಲಾ ಹಾಗೂ ಕಾಲೇಜಿನ ತುಕಡಿಗಳು ಅಕರ್ಷಕ ಪಥಸಂಚಲನ ನಡೆಸಿದರು.
ಮಂಡ್ಯದ ಜಿಲ್ಲಾ ಸಶಸ್ತ್ರ ಮೀಸಲುಪಡೆ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಧ್ವಜಾರೋಹಣ ನೆರವೇರಿಸಿ ವಂದನೆ ಸ್ವೀಕರಿಸಿದರು
ಗಣರಾಜ್ಯೋತ್ಸವ ಅಂಗವಾಗಿ ಕೋಲಾರದ ಕ್ಲಾಕ್ ಟವರ್ ನಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಧ್ವಜಾರೋಹಣ ನೆರವೇರಿಸಿದರು
ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರೂ ಆದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು
ವಿಜಯಪುರ ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಧ್ವಜಾರೋಹಣ ನೆರವೇರಿಸಿದರು
ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವ ಬೈರತಿ ಸುರೇಶ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.