ADVERTISEMENT

ಅಧಿಕಾರದಲ್ಲಿರುವ ಶಕ್ತಿಗಳಿಂದ ಸಂವಿಧಾನದ ಆತ್ಮ ಕೊಲ್ಲುವ ಯತ್ನ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 5:41 IST
Last Updated 26 ಜನವರಿ 2020, 5:41 IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು:ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೇ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಭಾರತೀಯ ಪ್ರಜಾಪ್ರಭುತ್ವದ ಆತ್ಮ ಸಂವಿಧಾನ ಜಾರಿಗೆ ಬಂದ ದಿನವಿದು. ಎಲ್ಲರನ್ನೂ ಸಮಾನರೆಂದು ನೋಡುವ, ಸಮಾನ ಅವಕಾಶ ನೀಡುವ ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೇ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ.ಈ ಮೂಲಕ ಶಾಶ್ವತ ಅಧಿಕಾರ ರಕ್ಷಣೆಗೆ ಮುಂದಾಗಿವೆ. ಇದರ ವಿರುದ್ಧ ಹೋರಾಡುವ ಪಣ ನಮ್ಮದಾಗಲಿ’ ಎಂದು ತಿಳಿಸಿದ್ದಾರೆ’ ಎಂದು ತಿಳಿಸಿದ್ದಾರೆ.

71ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿ ಟ್ವಿಟರ್‌ನಲ್ಲಿವಾಗ್ದಾಳಿ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.