ADVERTISEMENT

Republic Day 2026: ಸಂಪೂರ್ಣ ಭಾಷಣ ಓದಿದ ರಾಜ್ಯಪಾಲರು

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 4:47 IST
Last Updated 26 ಜನವರಿ 2026, 4:47 IST
<div class="paragraphs"><p>ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ&nbsp;ಭಾಷಣ ಓದುತ್ತಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ </p></div>

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಓದುತ್ತಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್

   

ಬೆಂಗಳೂರು: ನಗರದಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಂಪೂರ್ಣ ಭಾಷಣ ಓದಿದರು.

ಕಳೆದ ವಾರ ವಿಧಾನಮಂಡಲ ಅಧಿವೇಶನದ ವೇಳೆ ಮೊದಲ ಹಾಗೂ ಕೊನೆಯ ಸಾಲು ಓದಿ ನಿರ್ಗಮಿಸಿದ್ದರು. ಇದರಿಂದ ವಿವಾದ ಸೃಷ್ಟಿಯಾಗಿತ್ತು.

ADVERTISEMENT

ರಾಜ್ಯಪಾಲರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು (ಸೋಮವಾರ) ನಡೆದ ಕಾರ್ಯಕ್ರಮದಲ್ಲಿ 24 ಪುಟಗಳ ಭಾಷಣ ಓದಿದರು. ಹಿಂದಿಯಲ್ಲಿ ಅವರು ಭಾಷಣ ಮಾಡಿದರು.

ನಮ್ಮ ಸರ್ಕಾರದ ಕಾರ್ಯಕ್ರಮ ಎಂದು ಭಾಷಣದಲ್ಲಿರುವ ಅಂಶಗಳನ್ನು ಉಲ್ಲೇಖಿಸಿದರು.

20 ನಿಮಿಷದಲ್ಲಿ ತಮ್ಮ ಭಾಷಣ ಮುಗಿಸಿದರು.

ಧ್ವಜಾರೋಹಣ ನೆರವೇರಿಸಿದ ಗೆಹ್ಲೋಟ್

ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.