ADVERTISEMENT

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಇ–ಪಾಸ್‌

​ಪ್ರಜಾವಾಣಿ ವಾರ್ತೆ
Published 14 ಜನವರಿ 2026, 18:01 IST
Last Updated 14 ಜನವರಿ 2026, 18:01 IST
   

ಬೆಂಗಳೂರು: ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜ.26ರಂದು ನಡೆಯುವ ರಾಜ್ಯ ಮಟ್ಟದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಇ–ಪಾಸ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಆಸಕ್ತರು ಸೇವಾ ಸಿಂಧು ಪೋರ್ಟ್‌ನಲ್ಲಿ (www.sevasindhu.karnataka.gov.in) ಜ.24ರ ಸಂಜೆ 5ರ ಒಳಗೆ ಅಗತ್ಯ ವಿವರಗಳನ್ನು ನಮೂದಿಸಿ ಇ-ಪಾಸ್‌ಗಳನ್ನು ಪಡೆಯಬಹುದು.

ಇ–ಪಾಸ್ ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ 5ರಲ್ಲಿ ಪರಿಶೀಲನೆಗೆ ಮುದ್ರಿತ ಅಥವಾ ಡಿಜಿಟಲ್ ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.