ಬೆಂಗಳೂರು: ಗಣರಾಜ್ಯೋತ್ಸವದ ದಿನವಾದ ಇಂದು ನಾವೆಲ್ಲರೂ ಸಂವಿಧಾನ ರಕ್ಷಣೆಯ ಪಣ ತೊಡೋಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಸಂವಿಧಾನದ ಆಶಯಗಳನ್ನು ವ್ಯವಸ್ಥಿತವಾಗಿ ಹಿಸುಕಿ ಹಾಕುತ್ತಿರುವ ಪ್ರಯತ್ನ ನಿರ್ಭೀತಿಯಿಂದ ನಡೆಯುತ್ತಿದೆ. ಇಂದಿನ ವಿಷಮ ಕಾಲದಲ್ಲಿ ಸಂವಿಧಾನವನ್ನು ರಕ್ಷಿಸಲು ಪಣ ತೊಡುವ ಮೂಲಕವೇ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕಾಗಿದೆ’ ಎಂದು ತಿಳಿಸಿದ್ದಾರೆ.
ಗಣರಾಜ್ಯೋತ್ಸವದ ದಿನವಾದ ಇಂದು ನಾವೆಲ್ಲರೂ ಸಂವಿಧಾನ ರಕ್ಷಣೆಯ ಪಣ ತೊಡೋಣ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.