ADVERTISEMENT

ತುಂಗಭದ್ರಾ ಜಲಾಶಯದ ಕೆಳಹಂತದ ಕಾಲುವೆಗೆ ಏ.10ರ ತನಕ ನೀರು ಹರಿಸಿ: ರೈತ ಸಂಘ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2021, 10:02 IST
Last Updated 15 ಮಾರ್ಚ್ 2021, 10:02 IST
   

ವಿಜಯನಗರ (ಹೊಸಪೇಟೆ): ತುಂಗಭದ್ರಾ ಜಲಾಶಯದ ಕೆಳಮಟ್ಟದ ಕಾಲುವೆಗೆ (ಎಲ್‌ಎಲ್‌ಸಿ) ಏಪ್ರಿಲ್‌ 10ರ ವರೆಗೆ ನೀರು ಹರಿಸಬೇಕೆಂದು ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ. ಪುರುಷೋತ್ತಮಗೌಡ ಆಗ್ರಹಿಸಿದ್ದಾರೆ.

ಈ ಸಂಬಂಧ ಅವರು ಮೂಲಸೌಕರ್ಯ ಅಭಿವೃದ್ಧಿ, ಹಜ್‌ ಮತ್ತು ವಕ್ಫ್‌ ಖಾತೆ ಸಚಿವ ಆನಂದ್‌ ಸಿಂಗ್‌, ತುಂಗಭದ್ರಾ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್‌ ಮಂಜಪ್ಪ ಪವಾರ್‌, ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಪಿ. ಅನಿರುದ್ಧ ಶ್ರವಣ್ ಅವರಿಗೆ ಸೋಮವಾರ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಕಂಪ್ಲಿ, ಕುರುಗೋಡು, ಸಿರುಗುಪ್ಪ, ಬಳ್ಳಾರಿ ಗ್ರಾಮಾಂತರ ರೈತರು ಭತ್ತ ಬೆಳೆದಿದ್ದಾರೆ. ಈ ವರ್ಷ ಪ್ರತಿಕೂಲ ವಾತಾವರಣದಿಂದ ಬೆಳೆ ತಡವಾಗಿ ಬರಲಿದೆ. ಏ. 10ರ ವರೆಗೆ ಬೆಳೆಗೆ ನೀರು ಹರಿಸುವುದು ಅಗತ್ಯ. ಅಲ್ಲಿಯವರೆಗೆ ನೀರು ಹರಿಸಿ ಬೆಳೆ ಉಳಿಸಬೇಕು ಎಂದು ಹಕ್ಕೊತ್ತಾಯ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.