ADVERTISEMENT

ಉಪ್ಪಾರ ಸಮಾಜವನ್ನು ಎಸ್‌ಟಿಗೆ ಸೇರಿಸಿ: ಪುರುಷೋತ್ತಮಾನಂದಪುರಿ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 17:33 IST
Last Updated 10 ಫೆಬ್ರುವರಿ 2021, 17:33 IST
ಹೊಸದುರ್ಗ ತಾಲ್ಲೂಕಿನ ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ 22ನೇ ವರ್ಷದ ಪಟ್ಟಾಭಿಷೇಕ ಸಮಾರಂಭ ಬುಧವಾರ ನೆರವೇರಿತು. ಕುಂಚಿಟಿಗ ಮಹಾಸಂಸ್ಥಾನದ ಶಾಂತವೀರ ಸ್ವಾಮೀಜಿ, ಕೆಲ್ಲೋಡು ಕಾಗಿನೆಲೆ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಸಚಿವ ಕೆ.ಎಸ್. ಈಶ್ವರಪ್ಪ ಇದ್ದರು.

ಹೊಸದುರ್ಗ: ‘ಹಿಂದುಳಿದಿರುವ ಉಪ್ಪಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ₹ 100 ಕೋಟಿ ಅನುದಾನ ಮೀಸಲಿಡಬೇಕು. ಶ್ರೀಮಠದ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡಬೇಕು’ ಎಂದು ಪುರುಷೋತ್ತಮಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದರು.

ತಾಲ್ಲೂಕಿನ ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ 22ನೇ ವರ್ಷದಪಟ್ಟಾಭಿಷೇಕ ಸಮಾರಂಭ ಬುಧವಾರ ಶ್ರದ್ಧಾ, ಭಕ್ತಿಯಿಂದ ನೆರವೇರಿತು.

ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು, ಶಿವಲಿಂಗಾನಂದ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಡಿವಾಳ ಮಾಚಿದೇವ ಸ್ವಾಮೀಜಿ, ಕುಂಚಿಟಿಗ ಮಹಾಸಂಸ್ಥಾನದ ಶಾಂತವೀರ ಸ್ವಾಮೀಜಿ, ಕೆಲ್ಲೋಡು ಕಾಗಿನೆಲೆ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಹಾಗೂ ಸಚಿವರಾದ ಕೆ.ಎಸ್. ಈಶ್ವರಪ್ಪ, ಕೆ.ಗೋಪಾಲಯ್ಯ ಮತ್ತು ಉಪ್ಪಾರ ಸಮಾಜದ ಅಪಾರ ಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.