
ಪ್ರಜಾವಾಣಿ ವಾರ್ತೆ
ಬೆಂಗಳೂರು: 2023–24ನೇ ಸಾಲಿನ ಪ್ರಥಮ ಪಿಯು ಪ್ರವೇಶಕ್ಕೆ ದಂಡಶುಲ್ಕವಿಲ್ಲದೇ ಜೂನ್ 27ರವರೆಗೆ ಅವಕಾಶ ನೀಡಬೇಕು ಎಂದು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಇಲಾಖೆಯ ನಿರ್ದೇಶಕರಿಗೆ ಮನವಿ ಮಾಡಿದೆ.
ಶೈಕ್ಷಣಿಕ ವೇಳಾಪಟ್ಟಿಯಂತೆ ಪಿಯು ಪ್ರವೇಶಕ್ಕೆ ಮೇ 22ರಿಂದ ಜೂನ್ 15ರವರೆಗೆ ಅವಕಾಶ ನೀಡಲಾಗಿತ್ತು. ನಂತರದ ವಿಳಂಬ ಪ್ರವೇಶಕ್ಕೆ ₹ 730 ಹೆಚ್ಚುವರಿ ದಂಡಶುಲ್ಕ ವಿಧಿಸಲಾಗಿದೆ. ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಬಹುತೇಕ ವಿದ್ಯಾರ್ಥಿಗಳು ಬಡ ಕುಟುಂಬಗಳಿಂದ ಬರುತ್ತಾರೆ. ದಂಡಶುಲ್ಕ ಭರಿಸುವುದು ಕಷ್ಟವಾಗುತ್ತದೆ. ಹಾಗಾಗಿ, ಜೂನ್ 27ರವರೆಗೆ ಅವಕಾಶ ನೀಡಬೇಕು ಎಂದು ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ, ಪ್ರಮುಖರಾದ ಎಸ್.ಆರ್.ವೆಂಕಟೇಶ್, ಶಿವರಾಮ ಬಿ.ಮಾಲೀಪಾಟೀಲ, ಎಂ.ಜಯಣ್ಣ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.