ಬೆಂಗಳೂರು: ಕೃಷಿ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ – ಬಿಎಂಟಿಸಿ ಬಸ್‌ಗಳಿಗೆ ಭದ್ರತೆ ಒದಗಿಸುವಂತೆ ಪೊಲೀಸರಿಗೆ ಮನವಿ ಮಾಡಲಾಗಿದೆ.
‘ಸಾರಿಗೆ ಸಂಸ್ಥೆ ಬಸ್‌ಗಳು ಎಂದಿನಂತೆ ಸಂಚರಿಸಲಿವೆ. ಬಸ್ ಮತ್ತು ಸಂಸ್ಥೆಯ ಆಸ್ತಿಗೆ ಯಾವುದೇ ಹಾನಿಯಾಗದಂತೆ ಭದ್ರತೆ ಒದಗಿಸಬೇಕು’ ಎಂದು ಪೊಲೀಸ್ ಇಲಾಖೆಯನ್ನು ಕೋರಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದರು.
‘ಬಿಎಂಟಿಸಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಾಸ ಆಗುವುದಿಲ್ಲ. ಭದ್ರತೆ ಕೋರಿ ಪತ್ರ ಬರೆಯಲಾಗಿದೆ’ ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದರು.
‘ಮೆಟ್ರೊ ರೈಲು ಸಂಚಾರವೂ ಎಂದಿನಂತೆ ಇರಲಿದೆ. ಹೆಚ್ಚಿನ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಯನ್ನು ಕೋರಲಿದ್ದೇವೆ’ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.