ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ವರ್ಗಗಳ ಕೋಟಾವನ್ನು ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ತರುತ್ತಿರುವುದರಿಂದ ಸರ್ಕಾರಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚುವರಿ ಸೀಟುಗಳು ಲಭಿಸುವ ಸಾಧ್ಯತೆ ಇದೆ.
ಈ ಮೀಸಲಾತಿ ಜಾರಿಗೆ ಬಂದರೆ ಪ್ರತಿಯೊಂದು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ತಲಾ 25 ಸೀಟುಗಳು ಹೆಚ್ಚುತ್ತವೆ. ಅಂದರೆ ಈ ಹಂತದಲ್ಲಿ 450 ವೈದ್ಯಕೀಯ ಸೀಟುಗಳು ಹೆಚ್ಚುವರಿಯಾಗಿ ಸಿಗಲಿವೆ.
‘ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗದವರ ಕೋಟಾ ಜಾರಿಗೆ ತರಲು ನಿರ್ಧರಿಸಿದೆ. ಹೀಗಾಗಿ ಈ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಗೆ ಬರಲಿದೆ’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ.ಪಿ.ಜಿ.ಗಿರೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.