ADVERTISEMENT

ಒಳಮೀಸಲಾತಿ: ನೇಮಕಾತಿ ಅಧಿಸೂಚನೆ ರದ್ದು

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 16:20 IST
Last Updated 5 ಸೆಪ್ಟೆಂಬರ್ 2025, 16:20 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಒಳಪಟ್ಟು  ನೇಮಕಾತಿ ನಡೆಸುವ ಸಲುವಾಗಿ, 2024ರ ಅಕ್ಟೋಬರ್ 28ರ ನಂತರ ಹೊರಡಿಸಲಾದ ಎಲ್ಲ ನೇಮಕಾತಿ ಅಧಿಸೂಚನೆಗಳನ್ನು ರದ್ದುಪಡಿಸಿ ರಾಜ್ಯ ಸರ್ಕಾರವು ಆದೇಶಿಸಿದೆ.

ಒಳಮೀಸಲಾತಿ ಅಳವಡಿಸಿಕೊಂಡು ಹೊಸದಾಗಿ ನೇರ ನೇಮಕಾತಿ ಪ್ರಕ್ರಿಯೆ ನಡಸುವಂತೆಯೂ ಸೂಚಿಸಿದೆ.

ADVERTISEMENT

2024ರ ಅಕ್ಟೋಬರ್ 28ಕ್ಕೂ ಮೊದಲು ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಆ ದಿನಾಂಕದ ನಂತರ ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದರೆ, ಅವುಗಳನ್ನೂ ರದ್ದುಪಡಿಸಬೇಕು ಎಂದು ರಾಜ್ಯ ಸರ್ಕಾರವು ಎಲ್ಲ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಿದೆ.

ರದ್ದುಪಡಿಸಲಾದ ಎಲ್ಲ ನೇರ ನೇಮಕಾತಿಗಳಲ್ಲಿ, ಒಳಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಿ. ಜತೆಗೆ ಕಾಲಬದ್ಧವಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಎಂದು ಎಲ್ಲ ನೇಮಕಾತಿ ಪ್ರಾಧಿಕಾರಿಗಳು ಹಾಗೂ ಆಯ್ಕೆ ಪ್ರಾಧಿಕಾರಗಳಿಗೆ ಸರ್ಕಾರವು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.