ADVERTISEMENT

ಮುಂದಿನ ಶೈಕ್ಷಣಿಕ ವರ್ಷದಿಂದ ವಸತಿ ಶಾಲೆ ಪ್ರವೇಶಾತಿ 100ಕ್ಕೆ ಏರಿಕೆ: ಸಚಿವ ಕೋಟ

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 20:35 IST
Last Updated 6 ಜನವರಿ 2023, 20:35 IST
   

ಮಡಿಕೇರಿ: ‘ಸರ್ಕಾರಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ 50ರಿಂದ 100ಕ್ಕೆ ಏರಿಸಲಾಗುವುದು’ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜಿಲ್ಲೆಯ ಕುಶಾಲನಗರದ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಓಬವ್ವ ಆತ್ಮ ರಕ್ಷಣೆ ಕಲೆ’ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.

‘ರಾಜ್ಯದಲ್ಲಿ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವು
ದರಿಂದ ಪ್ರವೇಶಕ್ಕೆ ಬೇಡಿಕೆ ಇದೆ. ಇದನ್ನು ಪರಿಗಣಿಸಿ, 6ನೇ ತರಗತಿಗೆ ಹೆಚ್ಚುವರಿ
ಯಾಗಿ 50 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು. ‘ಎ’ ಮತ್ತು ‘ಬಿ’ ವಿಭಾಗ ರೂಪಿಸಲಾಗುವುದು’ ಎಂದರು.

ADVERTISEMENT

‘ವಸತಿಶಾಲೆಯಲ್ಲಿ ಓದಿದ 14 ವಿದ್ಯಾರ್ಥಿಗಳು ಐಐಟಿಗೆ ಆಯ್ಕೆಯಾಗಿರುವುದು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಒಟ್ಟು 830 ವಸತಿ ಶಾಲೆಗಳಿದ್ದು, 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.