ADVERTISEMENT

ಎನ್‌. ಮಹೇಶ್‌ ರಾಜೀನಾಮೆ ಅಂಗೀಕಾರ: ಎಚ್‌ಡಿಕೆ

ರಾಜ್ಯಪಾಲರಿಗೆ ರವಾನೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2018, 10:53 IST
Last Updated 15 ಅಕ್ಟೋಬರ್ 2018, 10:53 IST
   

ಬೆಂಗಳೂರು: ಶಿಕ್ಷಣ ಸಚಿವ ಎನ್‌ ಮಹೇಶ್ ಅವರ ರಾಜೀನಾಮೆ ಅಂಗೀಕರಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ರಾಜೀನಾಮೆ ಪತ್ರವನ್ನು ಈಗಾಗಲೇ ರಾಜ್ಯಪಾಲರಿಗೆ ಕಳಿಸಲಾಗಿದೆ. ಬಿಎಸ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್‌ ಮಿಶ್ರಾ ಅವರು ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದರು. ಅವರ ಸೂಚನೆ ಮೇರೆಗೆ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿರುವುದಾಗಿ ಕುಮಾರಸ್ವಾಮಿ ತಿಳಿಸಿದರು.

ರಾಜ್ಯದಲ್ಲಿ ಜೆಡಿಎಸ್‌–ಕಾಂಗ್ರೆಸ್‌ ಸರ್ಕಾರ ರಚನೆಯಾದ ನಾಲ್ಕೂವರೆ ತಿಂಗಳಲ್ಲೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್‌.ಮಹೇಶ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ADVERTISEMENT

ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಅವರು ವಿಕಾಸಸೌಧದಲ್ಲಿ ಅ.11ರಂದು ಸಂಜೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಈ ವಿಷಯ ಪ್ರಕಟಿಸಿದ್ದರು. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಸಲ್ಲಿಸಿದ್ದರು. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಕುಮಾರಸ್ವಾಮಿ ತಿಳಿಸಿದ್ದರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.