ಬೆಂಗಳೂರು:ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮೈತ್ರಿ ಸರ್ಕಾರದ ಅತೃಪ್ತ ಶಾಸಕರು, ಇಂದು(ಶನಿವಾರ) ಸಂಜೆ ಗೋವಾ ಅಥವಾ ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ.
ಈಗಾಗಲೇ ವಿಮಾನನಿಲ್ದಾಣದ ಕಡೆ ಪ್ರಯಾಣ ಬೆಳೆಸಿದ್ದಾರೆ. ಕೆಂಪೇಗೌಡ ವಿಮಾನನಿಲ್ದಾಣದ ಮೂಲಕ ಬೇರೆ ರಾಜ್ಯಕ್ಕೆ ಪ್ರಯಾಣ ಮಾಡುವರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ನೇತೃತ್ವದಲ್ಲಿ ವಿಮಾನದಲ್ಲಿ ಸಂಜೆ ನೆರೆ ರಾಜ್ಯದ ಖಾಸಗಿ ರೆಸಾರ್ಟ್‌ಗೆ ಶಾಸಕರು ತೆರಳುವರು ಎಂದು ಮೂಲಗಳು ತಿಳಿಸಿವೆ.
* ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.