ADVERTISEMENT

ಕ್ಷೇತ್ರ ಪುನರ್‌ ವಿಂಗಡಣೆ ವಿರುದ್ಧ ವಿಧಾನಸಭೆಯಲ್ಲಿ ಇಂದು ನಿರ್ಣಯ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2025, 0:24 IST
Last Updated 21 ಮಾರ್ಚ್ 2025, 0:24 IST
<div class="paragraphs"><p>ವಿಧಾನಸಭೆ</p></div>

ವಿಧಾನಸಭೆ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಹೊಸ ಜನಗಣತಿ ಆಧಾರದ ಮೇಲೆ ಕೈಗೊಳ್ಳುವ ಯಾವುದೇ ಕ್ಷೇತ್ರ ಪುನರ್‌ ವಿಂಗಡಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ವಿಧಾನಸಭೆಯಲ್ಲಿ ಶುಕ್ರವಾರ ನಿರ್ಣಯ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

ADVERTISEMENT

‘ ಹೀಗಾಗಿ, ಲೋಕಸಭೆ ಮತ್ತು ವಿಧಾನಸಭೆಗಳ ಸ್ಥಾನವನ್ನು ಹೆಚ್ಚಿಸುವ ಸಂದರ್ಭದಲ್ಲಿ ಹೊಸ ಜನಗಣತಿಯ ಜನಸಂಖ್ಯೆಯನ್ನು ಆಧರಿಸಿ ಮಾಡಬಾರದು. 1971ರ ಜನಗಣತಿಯನ್ನು ಆಧರಿಸಿಯೇ ಪ್ರತಿ ರಾಜ್ಯಗಳಿಗೆ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ನಿಗದಿಪಡಿಸಬೇಕು’ ಎಂದು ಒತ್ತಾಯಿಸಲಿದೆ.

‘ಹೊಸ ಜನಗಣತಿ ಆಧಾರದ ಮೇಲೆ ನಡೆಯುವ ಕ್ಷೇತ್ರ ಪುನರ್‌ವಿಂಗಡಣೆಯು ಅವೈಜ್ಞಾನಿಕವಾಗಲಿದೆ’ ಎಂದು ನಿರ್ಣಯದಲ್ಲಿ ಉಲ್ಲೇಖಿಸಲು ಉದ್ದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.