ADVERTISEMENT

ರಾಷ್ಟ್ರಪತಿ ಆಡಳಿತ ಹೇರಬಹುದೇ ?

​ಪ್ರಜಾವಾಣಿ ವಾರ್ತೆ
Published 19 ಜನವರಿ 2019, 5:17 IST
Last Updated 19 ಜನವರಿ 2019, 5:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮ ಶಾಸಕರನ್ನು ಅಕ್ರಮವಾಗಿ ರೆಸಾರ್ಟ್‌ಗಳಲ್ಲಿ ಬಂಧಿಸಿಟ್ಟಿದ್ದು, ರಾಜ್ಯದಲ್ಲಿ ಸಂವಿಧಾನದ ಪ್ರಕಾರ ಆಡಳಿತ ನಡೆಯುತ್ತಿಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಡಳಿತ ಹೇರಬಹುದೇ...?

ಇಂತಹುದೊಂದು ಪ್ರಶ್ನೆಗೆ ಹೈಕೋರ್ಟ್‌ನ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ, ‘ಹೌದು’ ಎನ್ನುತ್ತಾರೆ.

ರಾಜ್ಯದಲ್ಲಿನ ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ‘ಪ್ರಜಾವಾಣಿ’ಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ಈಗಿನ ಪರಿಸ್ಥಿತಿ ನೋಡಿದರೆ ಶಾಸಕರ ಸ್ವಾತಂತ್ರ್ಯ ಹರಣವಾಗುತ್ತಿದೆ ಎಂಬ ಕಾರಣಕ್ಕೆ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬಹುದು. ಸಂವಿಧಾನದ 356ನೇ ವಿಧಿಯ ಪ್ರಕಾರ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಬಹುದು’ ಎಂದು ಹೇಳಿದರು.

ಇದಕ್ಕೆ ವ್ಯತಿರಿಕ್ತವಾದ ಅಭಿಪ್ರಾಯ ವ್ಯಕ್ತಪಡಿಸಿದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್‌, ‘ರಾಷ್ಟ್ರಪತಿ ಆಡಳಿತ ಹೇರಲು ಸಾಧ್ಯವಿಲ್ಲ. ಸದ್ಯಕ್ಕೆ ಯಾರೂ ಬೆಂಬಲ ಹಿಂಪಡೆದಿಲ್ಲ. ಹಾಗಾಗಿ ತೊಂದರೆ ಇಲ್ಲ’ ಎಂದರು.

* ಇವನ್ನೂನ್ನೂಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.