ADVERTISEMENT

ಚಾಮರಾಜನಗರ ಜಿಲ್ಲೆಯಲ್ಲಿ ಕೋಳಿ, ಮೊಟ್ಟೆ ಮಾರಾಟಕ್ಕೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 14:43 IST
Last Updated 17 ಮಾರ್ಚ್ 2020, 14:43 IST
   

ಚಾಮರಾಜನಗರ: ನೆರೆಯ ಮೈಸೂರು ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿರುವ ಬೆನ್ನಲ್ಲೇ ಜಿಲ್ಲಾಡಳಿತವು ರೋಗ ತಡೆಗೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯಲ್ಲಿ ಕೋಳಿ ಹಾಗೂ ಅದರ ಉತ್ಪನ್ನಗಳ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು.

’ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರಲ್ಲಿದೆ. ವ್ಯಾಪಾರಿಗಳು ಚಿಕನ್‌, ಮೊಟ್ಟೆಗಳನ್ನು ಮಾರಾಟ ಮಾಡಬಾರದು. ಜನರು ಕೂಡ ಆರೋಗ್ಯದ ದೃಷ್ಟಿಯಿಂದ ಕೋಳಿ ಮಾಂಸ, ಮೊಟ್ಟೆಗಳಿಂದ ಸ್ವಲ್ಪ ದಿನ ದೂರ ಇರುವುದು ಒಳಿತು. ಮಟನ್‌, ಮೀನು ಮಾರಾಟಕ್ಕೆ ಯಾವುದೇ ನಿರ್ಬಂಧ ಇಲ್ಲ’ ಎಂದು ಅವರು ಹೇಳಿದರು.

ADVERTISEMENT

‘ಹೊರ ರಾಜ್ಯಗಳಿಂದ ಹಾಗೂ ಹೊರ ಜಿಲ್ಲೆಗಳಿಂದಲೂ ಜಿಲ್ಲೆಗೆ ಕೋಳಿ, ಮೊಟ್ಟೆಗಳ ಸಾಗಣೆ ಮಾಡುವಂತಿಲ್ಲ. ಇದನ್ನು ಪರಿಶೀಲಿಸುವುದಕ್ಕಾಗಿ ಜಿಲ್ಲೆಯ ನಾಲ್ಕೂ ಕಡೆಗಳಲ್ಲಿ ವಿಶೇಷ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.