ADVERTISEMENT

ಜಾತ್ರೆ, ಉತ್ಸವಗಳಿಗೆ ನಿರ್ಬಂಧ ತೆರವು

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2021, 19:44 IST
Last Updated 9 ಫೆಬ್ರುವರಿ 2021, 19:44 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.

ಕೋವಿಡ್‌ ಕಾರಣದಿಂದ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ 2020ರ ಮಾರ್ಚ್‌ 20ರಂದು ಆದೇಶ ಹೊರಡಿಸಲಾಗಿತ್ತು. ಸೆಪ್ಟೆಂಬರ್‌ 1ರಿಂದ ಕೆಲವು ಷರತ್ತಿಗಳೊಂದಿಗೆ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಸೇವೆ ಆರಂಭಿಸಲು ಅವಕಾಶ ಕಲ್ಪಿಸಲಾಗಿತ್ತು. ಈಗ ಎಲ್ಲ ಬಗೆಯ ನಿರ್ಬಂಧಗಳನ್ನೂ ತೆರವುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರಗಳು, ಜಿಲ್ಲಾಧಿಕಾರಿಗಳು ಹೊರಡಿಸಿರುವ ಮತ್ತು ಹೊರಡಿಸಲಿರುವ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಈ ಎಲ್ಲ ಕಾರ್ಯಗಳನ್ನೂ ನಡೆಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ದೇವಾಲಯಗಳಲ್ಲಿ ಎಲ್ಲ ಸೇವೆ ಮತ್ತು ಉತ್ಸವಗಳನ್ನು ಆರಂಭಿಸಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಎನ್‌. ದೀಕ್ಷಿತ್ ನೇತೃತ್ವದ ನಿಯೋಗ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನು ಇತ್ತೀಚೆಗೆ ಭೇಟಿಮಾಡಿ ಮನವಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.